ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರನ ಗುಂಡಿಕ್ಕಿ ಹತ್ಯೆ.!!
ಲಷ್ಕರ್-ಎ-ತೊಯ್ಬಾ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಹತ್ಯೆ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಅಪರಿಚಿತರು ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಕ್ರಮ್ ಘಾಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಒಂದು ವಾರದ ಅವಧಿಯಲ್ಲಿ ನಡೆದ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನ ಎರಡನೇ ಹತ್ಯೆ ಇದಾಗಿದೆ.

ಬಜೌರ್ ಜಿಲ್ಲೆಯಲ್ಲಿ ಬೈಕ್‌ನಲ್ಲಿ ಬಂದ ಪಾಕಿಸ್ತಾನದ ಅಪರಿಚಿತ ವ್ಯಕ್ತಿಗಳು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ರಮ್ ಖಾನ್ ಅಲಿಯಾಸ್ ಘಾಜಿ 2018-2020 ರ ಅವಧಿಯಲ್ಲಿ ಲಷ್ಕರ್‌ಗೆ ಉನ್ನತ ನೇಮಕಾತಿದಾರರಲ್ಲಿ ಒಬ್ಬನಾಗಿದ್ದ. ಕಳೆದ ಎರಡು ವರ್ಷಗಳಲ್ಲಿ ಕಾಶ್ಮೀರ ಕಣಿವೆಗೆ ಅನೇಕ ಬ್ಯಾಚ್‌ಗಳಲ್ಲಿ ನುಸುಳಿದ ಹಲವಾರು ಭಯೋತ್ಪಾದಕರ ಜವಾಬ್ದಾರಿಯನ್ನು ಹೊತ್ತಿದ್ದ.

ಜಮ್ಮು ಮತ್ತು ಕಾಶ್ಮೀರದಲ್ಲಿ 2018 ರ ಸುಂಜ್ವಾನ್ ಭಯೋತ್ಪಾದನಾ ದಾಳಿಯ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬನಾಗಿದ್ದ ಖ್ವಾಜಾ ಶಾಹಿದ್‌ನನ್ನು ಭಾನುವಾರ ಅಪಹರಿಸಲಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದನ ಮಾಡಲಾಯಿತು.

ಘಾಜಿ ಹತ್ಯೆಯಲ್ಲಿ ವಿವಿಧ ಭಯೋತ್ಪಾದಕ ಗುಂಪುಗಳು ಸೇರಿದಂತೆ ಸ್ಥಳೀಯ ವಿರೋಧಿಗಳ ಪಾತ್ರ ಇರಬಹುದು ಎನ್ನಲಾಗಿದೆ. ಘಾಜಿ ಲಷ್ಕರ್‌ನ ಕೇಂದ್ರ ನೇಮಕಾತಿ ಸೆಲ್‌ನ ಪ್ರಮುಖ ಸದಸ್ಯನಾಗಿದ್ದ. ಭಾರತದ ವಿರುದ್ಧ ದ್ವೇಷ ತುಂಬಿದ ಭಾಷಣಗಳಿಗೆ ಹೆಸರುವಾಸಿಯಾಗಿದ್ದ.

ಇತ್ತೀಚಿನ ದಿನಗಳಲ್ಲಿ ಲಷ್ಕರ್‌ನ ಉನ್ನತ ಕಾರ್ಯಕರ್ತನ ಎರಡನೇ ಹತ್ಯೆ ಇದಾಗಿದೆ. ಸೆಪ್ಟೆಂಬರ್‌ನಲ್ಲಿ ಎಲ್‌ಇಟಿ ಕಮಾಂಡರ್ ರಿಯಾಜ್ ಅಹ್ಮದ್‌ನನ್ನು ಪಿಒಕೆಯ ರಾವಲಕೋಟ್‌ನಲ್ಲಿರುವ ಅಲ್ ಖುದ್ದೂಸ್ ಮಸೀದಿಯ ಹೊರಗೆ ಕೊಲ್ಲಲಾಯಿತು. ಆತ ಪಿಒಕೆಯಲ್ಲಿ ಲಷ್ಕರ್ ನೇಮಕಾತಿಯನ್ನು ನಿರ್ವಹಿಸುತ್ತಿದ್ದ. ಘಾಜಿಯ ಹತ್ಯೆಯು ಎಲ್‌ಇಟಿ ಮತ್ತು ಐಎಸ್‌ಐಗೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!